
ಬೀದಿ ನಾಯಿ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೇಳೆ ಗೂಗಲ್ ಕಂಪನಿಯ ನಿವೃತ್ತ ನಿರ್ದೇಶಕ, ಜಯನಗರದ ನಿವಾಸಿ ಬಿ.ಆರ್.ನಾಗರಾಜ್ (63) ಅವರ ಮೇಲೆ ಸೋಮವಾರ ಬೆಳಿಗ್ಗೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ.
ನಾಗರಾಜ್ ಅವರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಎನ್‌ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದಾರೆ.
‘ಡಿಸೆಂಬರ್ 29ರಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಜಯನಗರದ ಐದನೇ ಬ್ಲಾಕ್‌ನ 36ನೇ ಕ್ರಾಸ್ ಬಳಿ ವಾಯುವಿಹಾರಕ್ಕೆ ತೆರಳಿದ್ದೆ. ಆ ಸಂದರ್ಭದಲ್ಲಿ ಆರರಿಂದ ಏಳು ಬೀದಿ ನಾಯಿಗಳು ಬಂದು ದಾಳಿ ನಡೆಸಿದವು. ಆ ನಾಯಿಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಡಬೇಕು. ಬಿಬಿಎಂಪಿ ಅಧಿಕಾರಿಗಳಿಗೂ ತಿಳಿವಳಿಕೆ ನೀಡಬೇಕು’ ಎಂದು ದೂರಿನಲ್ಲಿ ನಾಗರಾಜ್ ಕೋರಿದ್ದಾರೆ.
‘ನಾಗರಾಜ್ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.