ADVERTISEMENT

‘ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಕೆಗೆ ಕಾನೂನಿಲ್ಲ’: ಪಿಐಎಲ್ ವಜಾ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 16:36 IST
Last Updated 30 ಸೆಪ್ಟೆಂಬರ್ 2021, 16:36 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ತುಮಕೂರಿನ ವಕೀಲ ರಮೇಶ್ ನಾಯ್ಕ ಅರ್ಜಿ ಸಲ್ಲಿಸಿ, ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್‌ಎಚ್‌ಎಐ) ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸಬೇಕು ಎಂಬುದಕ್ಕೆ ಶಾಸನಬದ್ಧ ಅವಕಾಶವನ್ನು ಅರ್ಜಿದಾರರು ದಾಖಲಿಸಿಲ್ಲ’ ಎಂದು ಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.