ADVERTISEMENT

ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಾಳೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 15:53 IST
Last Updated 17 ಜನವರಿ 2026, 15:53 IST
<div class="paragraphs"><p> ಬೀದಿ ಬದಿ ವ್ಯಾಪಾರ</p></div>

ಬೀದಿ ಬದಿ ವ್ಯಾಪಾರ

   

ಬೆಂಗಳೂರು: ‘ಕರ್ನಾಟಕ ಮಹಿಳಾ ಬೀದಿ ಬದಿಯ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಜ.19ಕ್ಕೆ ಜೆ.ಸಿ. ರಸ್ತೆಯಲ್ಲಿರುವ ಪುರಭವನದಲ್ಲಿ ಬೀದಿ ಬದಿ ವ್ಯಾಪಾರಿ ಒಕ್ಕೂಟದ ಉದ್ಘಾಟನೆ ಹಾಗೂ ಬೀದಿ ಬದಿಯ ವ್ಯಾಪಾರಿಗಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷೆ ಆರ್. ಮುನಿಲಕ್ಷ್ಮೀ ತಿಳಿಸಿದರು.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿರುವ ಬೀದಿ ಬದಿಯ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳ ವಿತರಿಸಬೇಕು. ಮಹಿಳಾ ವ್ಯಾ‍ಪಾರಿಗಳಿಗೆ ಶೌಚಾಲಯ ನಿರ್ಮಿಸಬೇಕು. ಬೀದಿ ವ್ಯಾಪಾರಿಗಳ ಅಧಿನಿಯಮ 2014ರ ಸಂಪೂರ್ಣ ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿದರು. 

ADVERTISEMENT

ಒಕ್ಕೂಟದ ಉಪಾಧ್ಯಕ್ಷೆ ಲಲಿತಾ, ಪ್ರಧಾನ ಕಾರ್ಯದರ್ಶಿ ಜಮೀಲಾಬಾನು, ಸಹ ಕಾರ್ಯದರ್ಶಿಗಳಾದ ಧನಲಕ್ಷ್ಮೀ, ಜಿ. ಪುಷ್ಪಲತಾ, ಸಂಘಟನಾ ಕಾರ್ಯದರ್ಶಿ ಅಲೀಮಾ, ಖಜಾಂಜಿ ಲಕ್ಷ್ಮೀ ಆರ್., ಸಂಚಾಲಕಿ ದೀಪಾ ಬಡಿಗೇರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.