ADVERTISEMENT

ಚರ್ಚ್ ಸ್ಟ್ರೀಟ್‌ನಲ್ಲಿ ತೆರವಿಗೆ ಬೀದಿಬದಿ ವ್ಯಾಪಾರಿಗಳ ವಿರೋಧ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 21:02 IST
Last Updated 18 ಜೂನ್ 2025, 21:02 IST
ಚರ್ಚ್‌ ಸ್ಟ್ರೀಟ್‌ನಲ್ಲಿ ಬೀದಿಬದಿ ವ್ಯಾಪಾರಿಗಳ ಸಾಮಗ್ರಿಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದರು
ಚರ್ಚ್‌ ಸ್ಟ್ರೀಟ್‌ನಲ್ಲಿ ಬೀದಿಬದಿ ವ್ಯಾಪಾರಿಗಳ ಸಾಮಗ್ರಿಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದರು   

ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಚರ್ಚ್ ಸ್ಟ್ರೀಟ್‌ನಲ್ಲಿ ಬುಧವಾರ ಸಂಜೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಸಾಮಗ್ರಿಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಯಿತು.

ಐದಕ್ಕೂ ಹೆಚ್ಚು ವ್ಯಾಪಾರಿಗಳು, ‘ವ್ಯಾಪಾರ ನಡೆಸಲು ಪರವಾನಗಿ ಹೊಂದಿದ್ದೇವೆ’ ಎಂದರು. ಬಿಬಿಎಂಪಿ ಮಾರ್ಷಲ್‌ಗಳು ತೆರವು ಕಾರ್ಯಾಚರಣೆ ನಡೆಸಿ, ಸಾಮಗ್ರಿಗಳನ್ನು ಕೊಂಡೊಯ್ದರು.

ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ, ವಶಪಡಿಸಿಕೊಂಡಿರುವ ಸಾಮಗ್ರಿಗಳನ್ನು ವಾಪಸ್‌ ನೀಡುವಂತೆ ವ್ಯಾಪಾರಿಗಳು ಆಗ್ರಹಿಸಿದರು. ವ್ಯಾಪಾರಿಗಳು ಗುಂಪುಗೂಡಿದ್ದರಿಂದ, ಪೊಲೀಸರು ಸ್ಥಳಕ್ಕೆ ಬಂದು, ಸಮಸ್ಯೆ ಬಗೆಹರಿಸಿಕೊಳ್ಳಲು ಬಿಬಿಎಂಪಿ ಸಿಬ್ಬಂದಿ ಹಾಗೂ ವ್ಯಾಪಾರಿಗಳಿಗೆ ತಿಳಿಸಿದರು.

ADVERTISEMENT

‘ಸರ್ಕಾರ ಆರು ತಿಂಗಳ ಹಿಂದೆ ಅರ್ಜಿ ಆಹ್ವಾನಿಸಿದ್ದು, ಇಲ್ಲಿ ವ್ಯಾಪಾರ ನಡೆಸುವುದಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದರ ದೃಢೀಕರಣ ಪತ್ರ ನಮ್ಮಲ್ಲಿದೆ. ನಿಯಮಗಳ ಪ್ರಕಾರ ತೆರವು ಕಾರ್ಯ ಕೈಗೊಂಡಿಲ್ಲ’ ಎಂದು ಬೀದಿಬದಿ ವ್ಯಾಪಾರಿ ಅಕ್ರಂ ಪಾಷಾ ತಿಳಿಸಿದರು.

ಚರ್ಚ್‌ ಸ್ಟ್ರೀಟ್‌ನಲ್ಲಿ ಯಾರಿಗೂ ಬೀದಿ ಬದಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.