ADVERTISEMENT

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 19:30 IST
Last Updated 17 ಜೂನ್ 2021, 19:30 IST

ಬೆಂಗಳೂರು: ಕೋವಿಡ್‌ ಚಿಕಿತ್ಸೆಗಾಗಿ ನಿಗದಿತ ದರಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡುವಂತಹ ಖಾಸಗಿ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸೂಚಿಸಿದ್ದಾರೆ.

ಸಾರ್ವಜನಿಕ ದೂರಿನ ಮೇರೆಗೆ ಯಲಹಂಕದ ಅಶ್ವಿನಿ ಆಸ್ಪತ್ರೆ, ಅಪೂರ್ವ ಚೈಲ್ಡ್ ಆಸ್ಪತ್ರೆ, ಸಿ.ವೈ.ಟಿ. ಆಸ್ಪತ್ರೆ, ನವಚೇತನ ಹಾಗೂ ಕೆ.ಕೆ. ಆಸ್ಪತ್ರೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಪಡೆಯುತ್ತಿರುವುದು ಕಂಡು ಬಂದ ಕಾರಣ ಈ ಆಸ್ಪತ್ರೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಆಸ್ಪತ್ರೆಗಳ ವಿರುದ್ಧ ಕೆಪಿಎಂಇ ಕಾಯ್ದೆ ಹಾಗೂ ಎನ್‌ಡಿಎಂಎ ಕಾಯ್ದೆ ಅನ್ವಯ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ADVERTISEMENT

ದಾಳಿಯ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ, ರಾಜ್ಯ ಕ್ಷ ಕಿರಣ ವಿಕಿರಣ ಮತ್ತು ನಿರ್ದೇಶನಾಲಯ ಉಪನಿರ್ದೇಶಕ ಡಾ. ಕೆ.ಎಸ್. ರಾಜೇಶ್, ಆರೋಗ್ಯಾಧಿಕಾರಿ ಎಂ.ಆರ್. ಶಿವಕುಮಾರ್, ಡಾ. ರಾಮಚಂದ್ರರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.