ADVERTISEMENT

ವಸತಿ ಯೋಜನೆಗಳಲ್ಲಿ ಅವ್ಯವಹಾರ, ಕಠಿಣ ಶಿಕ್ಷೆಗೆ ಕಾನೂನು: ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 9:13 IST
Last Updated 11 ಡಿಸೆಂಬರ್ 2019, 9:13 IST
ವಸತಿ ಸಚಿವ ವಿ.ಸೋಮಣ್ಣ
ವಸತಿ ಸಚಿವ ವಿ.ಸೋಮಣ್ಣ   

ಬೆಂಗಳೂರು: ಆಶ್ರಯ ಯೋಜನೆಯಡಿ ಮನೆಗಳ ಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ, ಸಿಇಒ, ಪಿಡಿಒ ಮತ್ತು ಶಾಸಕರ ನೇತೃತ್ವದಲ್ಲಿ ಒಪ್ಪಿಗೆ ಪಡೆದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ವಿಕಾಸಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೇ ಮನೆಯನ್ನು ಹಲವರ ಹೆಸರಿನಲ್ಲಿ ಹಂಚಿಕೆ ಮಾಡಿ ಬಿಲ್ ಮಾಡಿರುವುದು ಗಮನಕ್ಕೆ ಬಂದಿದೆ ಎಂದರು.

ಗ್ರಾಮಸಭೆ ತೀರ್ಮಾನವೇ ಅಂತಿಮ ಅಲ್ಲ.ಗ್ರಾಮಪಂಚಾಯ್ತಿ ಅಧಿಕಾರ ಮೊಟಕು ಮಾಡದೇ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು.ತಪ್ಪು ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಇರಲಿದೆ ಎಂದು ನುಡಿದರು.

ADVERTISEMENT

ಆಶ್ರಯ ಮನೆಗಳ ಹಂಚಿಕೆಯ ನಕಲಿ ಬಿಲ್ ಮೂಲಕ₹ 9 ಕೋಟಿಗೂ ಹೆಚ್ಚು ಮೊತ್ತದ ಹಣ ದುರುಪಯೋಗವಾಗಿರುವ ಅನುಮಾನವಿದೆ. ಇದರಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒಗಳು ಶಾಮೀಲಾಗಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.