ADVERTISEMENT

ಎಲ್ಲಾ ಕಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ: ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 6:51 IST
Last Updated 5 ಡಿಸೆಂಬರ್ 2019, 6:51 IST
ಶಿವಾಜಿನಗರದ ಮತಗಟ್ಟೆಯೊಂದರಲ್ಲಿ ಮತದಾನಕ್ಕೆ ಸಾಲು ನಿಂತಿರುವ ಜನರು
ಶಿವಾಜಿನಗರದ ಮತಗಟ್ಟೆಯೊಂದರಲ್ಲಿ ಮತದಾನಕ್ಕೆ ಸಾಲು ನಿಂತಿರುವ ಜನರು   

ಬೆಂಗಳೂರು: ‘ನಗರದಲ್ಲಿ ಎಲ್ಲಿಯೂ ಯಾವುದೇ ಭದ್ರತೆಯ ಲೋಪ ಕಂಡುಬಂದಿಲ್ಲ. ಎಲ್ಲೆಡೆ ಸೂಕ್ತ ಬಂದೋಬಸ್ತ ಮಾಡಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಮುರುಗನ್ ಹೇಳಿದರು.

ಕೆ.ಆರ್ ಪುರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಗರದ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಹರಿಯಾಣದಿಂದ ಮೀಸಲು ಅರೆಸೇನಾ ಪಡೆಯನ್ನ ಕರೆಸಿಕೊಳ್ಳಲಾಗಿದೆ.ನಗರದಲ್ಲಿ ಏಳು ಸಾವಿರ ಜನ‌ ಪೊಲೀಸರ ನಿಯೋಜನೆ ಮಾಡಲಾಗಿದೆ’ ಎಂದರು.

‘ಕೆಲವು ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ. ಅದರ ಪ್ರಕಾರ ಪೊಲೀಸರ ನಿಯೋಜನೆ ಮಾಡಿದ್ದೇವೆ. ನಾನು ಕೆಲವು ಕಡೆ ಬೇಟಿ‌ ನೀಡಿದ್ದೇನೆ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.