ADVERTISEMENT

‘ನಾಯಕತ್ವ ಗುಣ ಬೆಳೆಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 7:01 IST
Last Updated 13 ಡಿಸೆಂಬರ್ 2020, 7:01 IST
ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಶಾಸಕ ಮುನಿರತ್ನ ಗೋಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಂಜುನಾಥ್, ಮಂಡಲದ ಅಧ್ಯಕ್ಷ ಶಿವಣ್ಣಗೌಡ, ಮುಖಂಡರಾದ ಲಕ್ಷ್ಮೀಕಾಂತರೆಡ್ಡಿ, ಜಿ.ಮೋಹನ್ ಕುಮಾರ್, ಜಿ.ಎಚ್.ರಾಮಚಂದ್ರ, ಎಂ.ಮಂಜುನಾಥ್, ವಿ.ಸಿ.ಚಂದ್ರು ಇದ್ದರು.

ರಾಜರಾಜೇಶ್ವರಿನಗರ: 'ಬಿಜೆಪಿ ಕಾರ್ಯಕರ್ತರು ಜನರ ಮನೆಬಾಗಿಲಿಗೆ ತೆರಳಿ, ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು. ಈ ಮೂಲಕ ಪಕ್ಷವನ್ನು ಬೇರುಮಟ್ಟದಿಂದ ಸದೃಢವಾಗಿ ಬೆಳೆಸುವ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು' ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ರಾಜರಾಜೇಶ್ವರಿನಗರದಲ್ಲಿ ಹಮ್ಮಿಕೊಂಡಿದ್ದ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಮುನಿರತ್ನ,'ಪಕ್ಷ ಮಾತೃಶ್ರೀಗೆ ಸಮಾನ. ನಿಷ್ಠೆ, ಪ್ರಾಮಾಣಿಕತೆ, ದೇಶಭಕ್ತಿ, ರಾಷ್ಟ್ರಸೇವೆ ಮೈಗೂಡಿಸಿಕೊಂಡಾಗ ಮಾತ್ರ ಪಕ್ಷ ಗುರುತಿಸಿ, ನಾಯಕತ್ವ ಸ್ಥಾನ ನೀಡಲು ಸಾಧ್ಯ' ಎಂದು ಹೇಳಿದರು.

ADVERTISEMENT

'ಬೇರೆ ಪಕ್ಷಗಳಿಗೆ ಹೋಲಿಸಿದರೆ, ಬಿಜೆಪಿ ಕಾರ್ಯಕರ್ತರಿಗೆ ಹೆಚ್ಚು ಸ್ಪಂದನೆ, ನಾಯಕತ್ವ ನೀಡುತ್ತದೆ. ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲ ವಾರ್ಡ್‍ಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷ ಸಂಘಟನೆಗೆ ಒತ್ತು ನೀಡಬೇಕು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.