ADVERTISEMENT

ಬೆಂಗಳೂರು: ಪಾರ್ಶ್ವವಾಯು ಪೀಡಿತರಿಗೆ ಸಂಗೀತ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 23:00 IST
Last Updated 1 ನವೆಂಬರ್ 2025, 23:00 IST
ಕಾರ್ಯಕ್ರಮದಲ್ಲಿ ಸಂಗೀತ ಚಿಕಿತ್ಸೆ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು
ಕಾರ್ಯಕ್ರಮದಲ್ಲಿ ಸಂಗೀತ ಚಿಕಿತ್ಸೆ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು   

ಬೆಂಗಳೂರು: ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಮಣಿಪಾಲ್ ಆಸ್ಪತ್ರೆಗಳ ಸಮೂಹವು ಇಂಡಿಯನ್ ಮ್ಯೂಸಿಕ್ ಎಕ್ಸ್‌ಪೀರಿಯೆನ್ಸ್ ಮ್ಯೂಸಿಯಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪಾರ್ಶ್ವವಾಯು ಪೀಡಿತರು ಸಂಗೀತದ ಮೂಲಕ ಚೇತರಿಸಿಕೊಳ್ಳುವ ಚಿಕಿತ್ಸಾ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

‘ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುತ್ತಿರುವವರ ಮೇಲೆ ಸಂಗೀತವು ಅಸಾಧಾರಣ ಪ್ರಭಾವವನ್ನು ಬೀರಿ, ಅವರ ಪುನಃಶ್ಚೇತನ ಹಾಗೂ ಚೇತರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟರು.

ಆಸ್ಪತ್ರೆಯ ನರರೋಗ ತಜ್ಞೆ ಡಾ. ರಿಚಾ ಸಿಂಗ್, ‘ಸಂಗೀತ ಚಿಕಿತ್ಸೆಯಿಂದ ಚೇತರಿಕೆಯ ಫಲಿತಾಂಶ ಗಮನಾರ್ಹವಾಗಿ ಸುಧಾರಿಸುತ್ತದೆ. ಈ ಚಿಕಿತ್ಸೆಗಳನ್ನು ಮುಂದುವರಿಸುವವರು ದೀರ್ಘಾವಧಿಯಲ್ಲಿ ಉತ್ತಮವಾಗಿ ಚೇತರಿಸಿಕೊಳ್ಳುತ್ತಾರೆ’ ಎಂದು ಅವರು ಹೇಳಿದರು.

ADVERTISEMENT

ಪಾರ್ಶ್ವವಾಯುವಿನಿಂದ ಚೇತರಿಸಿಕೊಂಡವರು, ಅವರ ಆರೈಕೆದಾರರು ಮತ್ತು ವೈದ್ಯಕೀಯ ವೃತ್ತಿಪರರು ತಮ್ಮ ಅನುಭವ ಹಂಚಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.