ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಿಚರ್ಡ್ಸ್ ಟೌನ್‌ನಲ್ಲಿರುವ ಶಾಲೆಯೊಂದರ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು 12ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಈ ಸಂಬಂಧ ಪುಲಕೇಶಿ ನಗರ ಠಾಣೆ ಪೊಲೀಸರು ಯುಡಿಆರ್ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
‘ಬೆಳಿಗ್ಗೆ 8.10ಕ್ಕೆ ಶಾಲೆಗೆ ಬಂದ 17 ವರ್ಷದ ವಿದ್ಯಾರ್ಥಿ, ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಹಾರಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಸ್ಪಷ್ವವಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಾಲಾ ಆಡಳಿತ ಮಂಡಳಿ, ‘ಶಾಲಾ ಕಟ್ಟಡದಿಂದ ಕೆಳಗೆ ಹಾರಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಉತ್ತಮ ಕ್ರೀಡಾಪಟುವಾಗಿದ್ದು, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ. ಮಂಗಳವಾರ ಶಾಲೆಗೆ ರಜೆ ನೀಡಲಾಗಿದೆ ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.