ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಅನ್ನಪೂರ್ಣೇಶ್ವರಿ ನಗರದ ಮನೆಯೊಂದರ ಮಹಡಿಯಿಂದ ಆಯತಪ್ಪಿ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇಔಟ್ ನಿವಾಸಿ ಪ್ರಿಯಾಂಕಾ (19) ಮೃತ ವಿದ್ಯಾರ್ಥಿನಿ.
ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಪ್ರಿಯಾಂಕಾ, ಬುಧವಾರ ಸಂಜೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದರು. ಮಹಡಿಯಲ್ಲಿ ಅಮ್ಮ ಬಟ್ಟೆ ಒಣಹಾಕುತ್ತಿದ್ದರು. ಅಲ್ಲಿಗೆ ಪ್ರಿಯಾಂಕಾ ಹೋಗುತ್ತಿದ್ದರು. ಎರಡನೇ ಮಹಡಿಗೆ ಹೋಗುತ್ತಿದ್ದಂತೆ ಮೆಟ್ಟಿಲುಗಳ ಬಳಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಅವರು ಮೃತಪಟ್ಟಿದ್ಧಾರೆ ಎಂದು ಪೊಲೀಸರು ಹೇಳಿದರು.
ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.