ADVERTISEMENT

ರಾಜಭವನ ಮುತ್ತಿಗೆಗೆ ಯತ್ನ; ಲಘು ಲಾಠಿ ಪ್ರಹಾರ

ದೆಹಲಿ ಹಿಂಸಾಚಾರ ಖಂಡಿಸಿ ರಾಜಭವನ ಎದುರು ಹೋರಾಟ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 20:29 IST
Last Updated 27 ಫೆಬ್ರುವರಿ 2020, 20:29 IST
ಪ್ರತಿಭಟನನಿರತ ಯುವಕನೊಬ್ಬನನ್ನು ವಶಕ್ಕೆ ಪಡೆದು ಪೊಲೀಸರು ಎಳೆದೊಯ್ದರು
ಪ್ರತಿಭಟನನಿರತ ಯುವಕನೊಬ್ಬನನ್ನು ವಶಕ್ಕೆ ಪಡೆದು ಪೊಲೀಸರು ಎಳೆದೊಯ್ದರು   

ಬೆಂಗಳೂರು: ದೆಹಲಿ ಹಿಂಸಾಚಾರ ಖಂಡಿಸಿ ನಗರದ ರಾಜಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಸಹ ನಡೆಸಿದರು.

‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ ಸಂಘಟನೆ ನೇತೃತ್ವದಲ್ಲಿ ಮೆರವಣಿಗೆ ಮೂಲಕ ರಾಜಭವನ ಎದುರಿನ ರಸ್ತೆಗೆ ಬಂದಿದ್ದ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಗೆ ಯಾವುದೇ ಅನುಮತಿ ಇರಲಿಲ್ಲ. ಸ್ಥಳದಲ್ಲಿದ್ದ ಪೊಲೀಸರು, ಪ್ರತಿಭಟನೆ ಕೈಬಿಟ್ಟು ವಾಪಸ್ ಹೋಗುವಂತೆ ಕೋರಿದರು.

‘ಪ್ರತಿಭಟನೆ ನಮ್ಮ ಹಕ್ಕು. ರಾಜ್ಯಪಾಲರು ಸ್ಥಳಕ್ಕೆ ಬಂದು ಮನವಿ ಪಡೆಯಬೇಕು. ಅಲ್ಲಿಯವರೆಗೂ ಸ್ಥಳದಿಂದ ಹೋಗುವುದಿಲ್ಲ’ ಎಂದ ಪ್ರತಿಭಟನಕಾರರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.