ADVERTISEMENT

ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 10:16 IST
Last Updated 14 ಸೆಪ್ಟೆಂಬರ್ 2021, 10:16 IST
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

‘ರಾಷ್ಟ್ರೀಯ ಶಿಕ್ಷಣ ನೀತಿ’ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ವಿಧಾನಸೌಧದತ್ತ ತೆರಳಿ, ಮುತ್ತಿಗೆ ಹಾಕಲು ತೀರ್ಮಾನಿಸಿದ್ದರು.

ಪ್ರತಿಭಟನಾ ಸ್ಥಳದಿಂದ ಮಧ್ಯಾಹ್ನ ವಿಧಾನಸೌಧದತ್ತ ಮೆರವಣಿಗೆಯಲ್ಲಿ ಹೊರಡಲು ವಿದ್ಯಾರ್ಥಿಗಳು ಸಜ್ಜಾಗಿದ್ದರು. ಅವರನ್ನು ತಡೆದ ಪೊಲೀಸರು, 'ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದೆ. ಮೆರವಣಿಗೆಯಲ್ಲಿ ಹೋಗಲು ಅವಕಾಶವಿಲ್ಲ. ವಾಪಸು ಹೋಗಿ’ಎಂದರು.

ADVERTISEMENT

ಅದಕ್ಕೆ ಒಪ್ಪದ ವಿದ್ಯಾರ್ಥಿಗಳು, ಮೆರವಣಿಗೆ ನಡೆಸುವುದಾಗಿ ಹೇಳಿ ಮುಂದಕ್ಕೆ ಹೊರಟರು. ಇದೇ ಸಂದರ್ಭದಲ್ಲಿ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದರು. ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು. ಪೊಲೀಸರ ವರ್ತನೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.