ಅತ್ಯಾಚಾರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬಸವನಗುಡಿಯ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪದಡಿ ಬಂಧನಕ್ಕೆ ಒಗಾಗಿರುವ ಜೀವನ್ ಗೌಡ (21) ಎಂಬಾತನನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಶುಕ್ರವಾರ ನಡೆದ ಸಭೆಯಲ್ಲಿ ಕಾಲೇಜು ಆಡಳಿತ ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ.
ಒತ್ತಡ ನಿವಾರಣೆ ಹಾಗೂ ಮಾನಸಿಕ ಆರೋಗ್ಯ ಕುರಿತು ಚರ್ಚೆ ನಡೆಸಲು 25ರಿಂದ 30 ವಿದ್ಯಾರ್ಥಿಗಳ ಗುಂಪು ರಚಿಸಲಾಗಿದೆ. ಪ್ರತಿ ತಂಡಕ್ಕೆ ಒಬ್ಬರು ಉಪನ್ಯಾಸಕರನ್ನು ನೇಮಿಸಲಾಗಿದೆ. ಪೊಲೀಸರಿಗೆ ದೂರು ನೀಡಿರುವ ವಿದ್ಯಾರ್ಥಿನಿ ಒಂದು ತಂಡದಲ್ಲಿ ಇದ್ದರು. ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಉಪನ್ಯಾಸಕರ ಬಳಿ ಹೇಳಿಕೊಂಡಿರಲಿಲ್ಲ. ಪೋಷಕರ ಬಳಿ ನೀಡಿದ ಮಾಹಿತಿ ಮೇರೆಗೆ ದೂರು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಘಟನೆ ಖಂಡಿಸಿ ಕಾಲೇಜು ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಲು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಘಟಕ ರಚಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.