ADVERTISEMENT

‘ವಿದ್ಯಾರ್ಥಿಗಳು ಸಂಸ್ಕೃತಿ ರಾಯಭಾರಿಗಳಾಗಲಿ’

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 19:31 IST
Last Updated 11 ಫೆಬ್ರುವರಿ 2020, 19:31 IST
ಕಾರ್ಯಕ್ರಮವನ್ನು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ವಿ.ಕೃಷ್ಣಮೂರ್ತಿ, ಬಿ.ಎಚ್.ಸುರೇಶ್ ಇದ್ದಾರೆ.
ಕಾರ್ಯಕ್ರಮವನ್ನು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ವಿ.ಕೃಷ್ಣಮೂರ್ತಿ, ಬಿ.ಎಚ್.ಸುರೇಶ್ ಇದ್ದಾರೆ.   

ರಾಜರಾಜೇಶ್ವರಿನಗರ: ‘ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಸಂಸ್ಕೃತಿಯ ರಾಯಭಾರಿಗಳಾದಾಗ ಮಾತ್ರ ದೇಶದ ಸಂಸ್ಕೃತಿ, ಪರಂಪರೆಯ ಉಳಿಯುವಿಕೆಯ ಪ್ರತೀಕಗಳಾಗಬಹುದು’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮಾಗಡಿ ರಸ್ತೆಯ ಕೊಡಿಗೇಹಳ್ಳಿಯ ನ್ಯೂ ಹಾರ್ಡ್‍ವಿಕ್ ಇಂಡಿಯನ್ ಸ್ಕೂಲ್‍ನಲ್ಲಿ ಹಮ್ಮಿಕೊಂಡಿದ್ದ ದಶವೈಭವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಚಿತ್ರದುರ್ಗ ಭೋವಿ ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮವಾದ ದಾರಿ ತೋರಿಸುವ ಹೊಣೆ ಹೊರಬೇಕು’ ಎಂದರು.

ADVERTISEMENT

ಸಂಸ್ಥೆಯ ಅಧ್ಯಕ್ಷ ವಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.