ADVERTISEMENT

ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಅಗತ್ಯ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2018, 19:45 IST
Last Updated 30 ನವೆಂಬರ್ 2018, 19:45 IST
ಸ್ವಾಮಿ ವಿವೇಕಾನಂದ ಶಾಲೆಯ ಅಧ್ಯಕ್ಷ ನಾಗರಾಜ ಗುಪ್ತ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. (ಎಡದಿಂದ) ಡಾ.ಸಿದ್ದು ಕುಮಾರ್, ನಾರಾಯಣಸ್ವಾಮಿ, ವೆಂಕಟೇಶ್, ಕೆ.ವಿ.ಶ್ರೀಕಾಂತ್ ಇದ್ದಾರೆ
ಸ್ವಾಮಿ ವಿವೇಕಾನಂದ ಶಾಲೆಯ ಅಧ್ಯಕ್ಷ ನಾಗರಾಜ ಗುಪ್ತ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. (ಎಡದಿಂದ) ಡಾ.ಸಿದ್ದು ಕುಮಾರ್, ನಾರಾಯಣಸ್ವಾಮಿ, ವೆಂಕಟೇಶ್, ಕೆ.ವಿ.ಶ್ರೀಕಾಂತ್ ಇದ್ದಾರೆ   

ಹೊಸಕೋಟೆ: ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ವಹಿಸಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ವೆಂಕಟೇಶ್ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ 26ನೇ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಜ್ಞಾನ ವಿಕಾಸಕ್ಕೆ ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮೊದಲು ಕಲಿಯಬೇಕು’ ಎಂದು ಹೇಳಿದರು.

ADVERTISEMENT

ವಿಜ್ಞಾನ ಪರಿಷತ್‌ನ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ವಿ.ಶ್ರೀಕಾಂತ್,ಡಾ.ಸಿದ್ದುಕುಮಾರ್ ಇದ್ದರು. ವಿವೇಕಾನಂದ ಶಾಲೆ ಅಧ್ಯಕ್ಷ ನಾಗರಾಜ ಗುಪ್ತ ಸಮಾವೇಶಕ್ಕೆ ಚಾಲನೆ ನೀಡಿದರು.

‘ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ ತಂತ್ರಜ್ಞಾನ ಮತ್ತು ಅವಿಷ್ಕಾರಗಳು ’ವಿಷಯದ ಮಂಡನೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 20 ತಂಡ ಭಾಗವಹಿಸಿದ್ದು ಆಯ್ಕೆಯಾದ 10 ತಂಡಗಳು ಕಲುಬುರ್ಗಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.