
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಸುಬ್ಬಯ್ಯ ವೃತ್ತದ ಮಿಷನ್ ರಸ್ತೆಯಲ್ಲಿ ಜಲಮಂಡಳಿಯಿಂದ ಪೈಪ್‌ಲೈನ್ ಕಾಮಗಾರಿ ನಡೆಸಲಾಗುತ್ತಿದ್ದು, ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ಗೆ ತೆರಳುವ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಜತೆಗೆ ಮಿಷನ್ ರಸ್ತೆ, ಲಾಲ್‌ಬಾಗ್ ರಸ್ತೆ, ನಾಲಾ ರಸ್ತೆ, ಡಬಲ್ ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.