ADVERTISEMENT

ಸಬ್‌ ಇನ್‌ಸ್ಪೆಕ್ಟರ್‌ 300 ಹುದ್ದೆಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 19:52 IST
Last Updated 16 ಅಕ್ಟೋಬರ್ 2019, 19:52 IST

ಬೆಂಗಳೂರು: ಮಹಿಳಾ ಸಬ್‌ ಇನ್‌ಸ್ಪೆಕ್ಟರ್‌ಗಳ 63 ಹುದ್ದೆ ಸೇರಿ ಒಟ್ಟು 300 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಪೊಲೀಸ್‌ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿಯ ಜೊತೆ ಸಾಮಾನ್ಯ ವರ್ಗದವರು ₹ 250 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ₹ 100 ಶುಲ್ಕ ಪಾವತಿಸಬೇಕು. ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡಬೇಕು.

ಅರ್ಜಿ ಸಲ್ಲಿಸಲು ನ. 6 ಕೊನೆಯ ದಿನ. ಶುಲ್ಕ ಪಾವತಿಸಲು ನ. 8 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080–22943346 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.