ADVERTISEMENT

ವೃದ್ಧಗೆ ಯಶಸ್ವಿ ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 22:00 IST
Last Updated 18 ಜುಲೈ 2020, 22:00 IST

ಬೆಂಗಳೂರು: ಪಾರ್ಶ್ವವಾಯು ಸಮಸ್ಯೆಗೆ ಒಳಗಾಗಿದ್ದ 97 ವರ್ಷದ ಒಬ್ಬ ವೃದ್ಧಗೆ ನಗರದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಎರಡು ವಾರಗಳಿಂದ ತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹತ್ತಿರದ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಿದ್ದರು. ಅಲ್ಲಿನ ವೈದ್ಯರು ಫೋರ್ಟಿಸ್ ಆಸ್ಪತ್ರೆಗೆ ಶಿಫಾರಸು ಮಾಡಿದ್ದರು.

ಆಸ್ಪತ್ರೆಯ ನಿರ್ದೇಶಕ ಡಾ. ರಾಜ್‌ಪಾಲ್‌ ಸಿಂಗ್‌ ನೇತೃತ್ವದ ವೈದ್ಯರ ತಂಡ ಅವರನ್ನು ಪರೀಕ್ಷೆ ಮಾಡಿ, ಎಂಆರ್‌ಐ ಸ್ಕ್ಯಾನಿಂಗ್‌ಗೆ ಒಳಪಡಿಸಿತು. ಈ ವೇಳೆ ಮಿದುಳಿಗೆ ರಕ್ತವನ್ನು ಪೂರೈಸುವ ನಾಳಗಳ ಕಾರ್ಯದಲ್ಲಿ ವ್ಯತ್ಯಯವಾಗಿರುವುದು ಪತ್ತೆಯಾಯಿತು. ಇದರಿಂದಾಗಿ ಅವರು ಪಾರ್ಶ್ವವಾಯುವಿಗೆ ಒಳಗಾಗಿರುವುದನ್ನು ಗುರುತಿಸಿದ ವೈದ್ಯರು, ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ADVERTISEMENT

‘ಶಸ್ತ್ರಚಿಕಿತ್ಸೆ 45 ನಿಮಿಷಗಳ ಕಾಲ ನಡೆಯಿತು. ಬಳಿಕ ಅವರು ಬೇಗ ಚೇತರಿಸಿಕೊಂಡಿದ್ದು, ಎರಡು ದಿನಗಳ ಬಳಿಕ ಮನೆಗೆ ಕಳುಹಿಸಲಾಯಿತು’ ಎಂದು ಡಾ.ರಾಜ್‌ಪಾಲ್ ಸಿಂಗ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.