
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಆರ್.ಟಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಹಮತ್ ನಗರದಲ್ಲಿ ಬಾಲಕನೊಬ್ಬ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಮೀರ್(16) ಆತ್ಮಹತ್ಯೆ ಮಾಡಿಕೊಂಡ ಬಾಲಕ.
‘ಶುಕ್ರವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲಸಕ್ಕೆ ತೆರಳಿದ್ದ ಪೋಷಕರು ಮನೆಗೆ ಬಂದು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಪೋಷಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.
‘ಪೋಷಕರು ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.