ಕರ್ನಾಟಕ ಹೈಕೋರ್ಟ್
ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಮುಕ್ತಾಯಗೊಂಡ ವೀಸಾ ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಡಾನ್ ಪ್ರಜೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಸುಡಾನ್ ಪ್ರಜೆ ಅವಾಬ್ ಆದಿಲ್ ಅಹಮದ್ ಮೊಹಮದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?: ಅರ್ಜಿದಾರರು ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದು ಇಲ್ಲೇ ನೆಲಸಿದ್ದರು. 2023ರ ಆಗಸ್ಟ್ 9ರಂದು ವೀಸಾ ಅವಧಿ ಮುಕ್ತಾವಾಗಿದ್ದು, ವಿಸ್ತರಣೆ ಮಾಡಬೇಕು ಎಂದು ಕೋರಿ ವಿದೇಶಿಗರ ಪ್ರಾದೇಶಿಕ ನೋಂದಣಾಧಿಕಾರಿ ಕಚೇರಿಗೆ (ಎಫ್ಆರ್ಆರ್ಒ) 2025ರ ಸೆಪ್ಟೆಂಬರ್ 11ರಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ತಿರಸ್ಕರಿಸಿ ಆನ್‌ಲೈನ್ ಹಿಂಬರಹ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.