
ಪ್ರಜಾವಾಣಿ ವಾರ್ತೆ
ಬೆಂಗಳೂರು: ಅಖಿಲ ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷರಾಗಿ ಆನಂದ ಮಾದಲಗೆರೆ ಹಾಗೂ ಅಧ್ಯಕ್ಷರಾಗಿ ಕಾ.ವೆಂ.ಶ್ರೀನಿವಾಸಮೂರ್ತಿ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಒಕ್ಕೂಟದ ಉಪಾಧ್ಯಕ್ಷರಾಗಿ ಬಂಡ್ಲಹಳ್ಳಿ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ. ರಾಜಾರಾಮ್, ಸಂಘಟನಾ ಕಾರ್ಯದರ್ಶಿಯಾಗಿ ಇಂಚರ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಗಣೇಶ್ ದೇಸಾಯಿ, ಉಷಾ ಉಮೇಶ್, ಖಜಾಂಚಿಯಾಗಿ ಅನುರಾಗ್ ಗದ್ದಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೆಂಕಟೇಶಮೂರ್ತಿ ಶಿರೂರು, ರಾಜಶೇಖರ ನುಲಿ, ಕೆಂಕೆರೆ ಮಲ್ಲಿಕಾರ್ಜುನ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.