ADVERTISEMENT

ಕಬ್ಬು ಬೆಳೆಗಾರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 20:12 IST
Last Updated 4 ಜೂನ್ 2019, 20:12 IST
ಕಾರ್ಖಾನೆಗಳಿಂದ ರೈತರಿಗೆ ಪಾವತಿ ಆಗಬೇಕಿರುವ ಕಬ್ಬಿನ ಬಾಕಿ ಹಣವನ್ನು ಕೊಡಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ರೈತರೊಬ್ಬರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು –ಪ್ರಜಾವಾಣಿ ಚಿತ್ರ

ಬೆಂಗಳೂರು: ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದಾರೆ.

ಪ್ರತಿಭಟನೆ ನಡೆಸಿದ ರೈತ ಮುಖಂಡರನ್ನು ಮಂಗಳವಾರ ವಿಧಾನಸೌಧಕ್ಕೆ ಕರೆಸಿಕೊಂಡುಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿದರು. ಯಾವುದೇ ಷರತ್ತು ಇಲ್ಲದೆ ರೈತರ ಸಾಲ ಮನ್ನಾ ಮಾಡಬೇಕು. ಕಬ್ಬು ಬಾಕಿ ಹಣ ಕೊಡಿಸಲು ಕ್ರಮ ಕೈಗೊಳ್ಳಬೇಕು, ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.