
ಪ್ರಜಾವಾಣಿ ವಾರ್ತೆಬೆಂಗಳೂರು: ಯಶವಂತಪುರ ಮೇಲ್ಸೇತುವೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಬಾಬು ಎಂಬುವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಮರದಲ್ಲಿ ನೇತಾಡುತ್ತಿದ್ದ ಮೃತದೇಹ ನೋಡಿ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಯಶವಂತಪುರ ಠಾಣೆ ಪೊಲೀಸರು ಹೇಳಿದರು.
‘ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.