ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸುಜಾತಮ್ಮ ಹಾಗೂ ಉಪಾಧ್ಯಕ್ಷರಾಗಿ ಸೌಮ್ಯಾ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
27 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷರ ಸ್ಥಾನಕ್ಕಾಗಿ(ಸಾಮಾನ್ಯ ಮಹಿಳೆ) ಸುಜಾತಮ್ಮ ಮತ್ತು ಮಮತಾ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ(ಎಸ್.ಸಿ ಸಾಮಾನ್ಯ) ಸೌಮ್ಯಾ, ರತ್ನಮ್ಮ ನಾಮಪತ್ರ ಸಲ್ಲಿಸಿದ್ದರು. ಕೊನೇ ಗಳಿಗೆಯಲ್ಲಿ ಮಮತಾ ಮತ್ತು ರತ್ನಮ್ಮ ಅವರು, ನಾಮಪತ್ರ ಹಿಂತೆಗೆದುಕೊಂಡರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಕೆ.ವೀರಣ್ಣ, ಅಂಬಿಕಾ ರಾಜೇಂದ್ರಕುಮಾರ್, ಚನ್ನಮ್ಮ, ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ಆರ್.ಡಿ.ರಾಜಣ್ಣ, ಚಿಕ್ಕಣ್ಣ, ಆರ್.ಎಚ್.ಹನುಮೇಗೌಡ, ನಾಗಭೂಷಣ್, ಸುಜಾತ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಎಂ.ಮಂಜುನಾಥ್, ವರುಣ್, ಅಶೋಕ್ ಅವರು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.