ADVERTISEMENT

ಸುಲ್ತಾನ್‍ಪಾಳ್ಯ: 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:32 IST
Last Updated 3 ಜುಲೈ 2025, 15:32 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಸುಲ್ತಾನ್‍ಪಾಳ್ಯದಲ್ಲಿ ನೆಲಸಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾರ್ಥಿನಿ ತಂದೆ ಆಟೊ ಚಾಲಕರಾಗಿದ್ದಾರೆ. ತಾಯಿ ಮನೆಗೆಲಸ ಮಾಡುತ್ತಾರೆ. ಆಕೆ 9ನೇ ತರಗತಿ ಓದುತ್ತಿದ್ದಳು. ಓದಿನ ವಿಚಾರಕ್ಕೆ ಮಗಳಿಗೆ ತಾಯಿ ಬುದ್ಧಿಮಾತು ಹೇಳಿದ್ದರು. ಬುಧವಾರ ಬೆಳಿಗ್ಗೆ ಸಹ ತಾಯಿ ಶಾಲೆಗೆ ಹೋಗುವಂತೆ ಮಗಳಿಗೆ ಬುದ್ಧಿಮಾತು ಹೇಳಿ ಕೆಲಸಕ್ಕೆ ತೆರಳಿದ್ದರು. ಆದರೆ, ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ ಆಕೆ, ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಆರ್.ಟಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.