
ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಸುಮಂಗಲಿ ಸೇವಾಶ್ರಮದ ಸುವರ್ಣ ಸಂಭ್ರಮ ಸಮಾರಂಭ ಇದೇ 30ರಂದು ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಶ್ರಮದ ಅಧ್ಯಕ್ಷೆ ಎಸ್.ಜಿ. ಸುಶೀಲಮ್ಮ, ‘ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ಭಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದು, ‘ಸುಮಂಗಲಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಮಾರಂಭ ಉದ್ಘಾಟಿಸುತ್ತಾರೆ’ ಎಂದು ಹೇಳಿದರು.
‘ಮೂರು ಪುಸ್ತಕಗಳು ಬಿಡುಗಡೆಯಾಗಲಿದ್ದು, ‘ಕ್ಷೇಮ’ ಪುಸ್ತಕವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಬಿಡುಗಡೆ ಮಾಡುತ್ತಾರೆ. ‘ಆಶ್ರಮ ನಡೆದು ಬಂದ ಹಾದಿ’ ಪುಸ್ತಕವನ್ನು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ ಹಾಗೂ ‘ಯೋಗ’ ಪುಸ್ತಕವನ್ನು ರಾಜ್ಯಸಭೆ ಸದಸ್ಯ ಕೆ. ನಾರಾಯಣ ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.