ADVERTISEMENT

ನಿವೃತ್ತ ಐಎಎಸ್‌ ಅಧಿಕಾರಿ ಕಪಿಲ್‌ ಮೋಹನ್‌ ವಿರುದ್ಧದ ಸಮನ್ಸ್‌ ರದ್ದು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 16:22 IST
Last Updated 27 ಮಾರ್ಚ್ 2024, 16:22 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಕಪಿಲ್ ಮೋಹನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿ ದಾಖಲಿಸಿದ್ದ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಮನ್ಸ್ ವಜಾಗೊಳಿಸುವಂತೆ ಕೋರಿ ಕಪಿಲ್ ಮೋಹನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು ಈ ಕುರಿತಂತೆ ಆದೇಶಿಸಿದೆ.

'ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ ಬಳಿಕ ಸಲ್ಲಿಸಲಾಗಿದ್ದ ಬಿ ರಿಪೋರ್ಟ್‌ ಅನ್ನು ವಿಚಾರಣಾ ನ್ಯಾಯಾಲಯ ಒಪ್ಪಿಕೊಂಡಿದೆ. ಹೀಗಾಗಿ, ಬಿ ರಿಪೋರ್ಟ್‌ಗೆ ಸಂಬಂಧಿಸಿದ ಆದೇಶ ತಾರ್ಕಿಕ ಅಂತ್ಯ ಕಂಡಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ, ಅರ್ಜಿದಾರರ ವಿರುದ್ಧ 2023ರ ಫೆಬ್ರುವರಿ 2ರಂದು ಜಾರಿ ಮಾಡಲಾಗಿದ್ದ ಸಮನ್ಸ್‌ ರದ್ದುಗೊಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.