
ಪ್ರಜಾವಾಣಿ ವಾರ್ತೆ
ಬೆಂಗಳೂರು: ತುಳುಕೂಟದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಂದರ್‌ರಾಜ್ ರೈ (57) ಅವರು ಹೃದಯಾಘಾತದಿಂದ ಗುರುವಾರ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.
ಅವರಿಗೆ ಪುತ್ರಿ ಹಾಗೂ ಪತ್ನಿ ಇದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುಕ್ಕುಂಜೋಡು ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.