ADVERTISEMENT

ಭಾಷಾ ಮಾಧ್ಯಮ: ಸುಪ್ರೀಂ ತೀರ್ಪು ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 16:17 IST
Last Updated 4 ಸೆಪ್ಟೆಂಬರ್ 2020, 16:17 IST

ಬೆಂಗಳೂರು: ‘ಎಲ್ಲ ತೆಲುಗು ಮಾಧ್ಯಮದ ಶಾಲೆಗಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್‌ ತೀರ್ಪು ನೀಡಿರುವುದು ಸ್ವಾಗತಾರ್ಹ’ ಎಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ಹೇಳಿದೆ.

‘ಬೋಧನಾ ಮಾಧ್ಯಮವು ಪ್ರಾಯೋಗಿಕವಾಗಿ ಮಗುವಿನ ಮಾತೃಭಾಷೆಯಲ್ಲಿರಬೇಕು ಎಂದು ನ್ಯಾಯಾಲಯ ಹೇಳಿರುವುದು ಸಂವಿಧಾನಾತ್ಮಕ ಮಾತ್ರವಲ್ಲದೆ ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಶಿಕ್ಷಣ ಹಕ್ಕು ಕಾಯಿದೆಯ ಸಿಂಧುತ್ವವನ್ನು ಎತ್ತಿ ಹಿಡಿದಂತಾಗಿದೆ’ ಎಂದು ಸಮನ್ವಯದ ಸದಸ್ಯ, ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಹೇಳಿದ್ದಾರೆ.

‘ರಾಷ್ಟ್ರೀಯ ಶಿಕ್ಷಣ ನೀತಿಯು ಆದ್ಯತೆಯ ಮೇರೆಗೆ ಕನಿಷ್ಠ 8ನೇ ತರಗತಿಯವರೆಗೆ ಶಿಕ್ಷಣವನ್ನು ಮಗುವಿನ ಮಾತೃಭಾಷೆಯಲ್ಲಿಯೇ ಒದಗಿಸಬೇಕೇಂದು ಹೇಳಿರುವುದು, ಪ್ರಾಥಮಿಕ ಶಿಕ್ಷಣ ಮಗುವಿನ ಮಾತೃಭಾಷೆಯಲ್ಲಿಯೇ ಇರಬೇಕು ಎಂಬ ಕರ್ನಾಟಕ ಸರ್ಕಾರದ ನಿಲುವಿಗೆ ಈ ತೀರ್ಪು ದೊಡ್ಡ ಇಂಬು ನೀಡಲಿದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.