ಎಫ್‌ಐಆರ್
ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣದಲ್ಲಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.
‘ವಕೀಲ ಭಕ್ತವತ್ಸಲ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ 132 ಹಾಗೂ 133ನೇ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಘಟನೆಯು ದೆಹಲಿಯಲ್ಲಿ ನಡೆದಿದ್ದು, ವಿಧಾನಸೌಧ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದೇವೆ. ದೆಹಲಿ ಪೊಲೀಸರಿಗೆ ಎಫ್‌ಐಆರ್ ಹಸ್ತಾಂತರ ಮಾಡಲಾಗುವುದು’ ಎಂದು ಪೊಲೀಸರು ಹೇಳಿದರು.
ರಾಕೇಶ್ ಎಂಬ ವಕೀಲ ನ್ಯಾಯಾಲಯದ ಸಭಾಂಗಣದಲ್ಲಿ (ಕೋರ್ಟ್ ನಂ.1) ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದಾರೆ. ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಭಕ್ತವತ್ಸಲ ಅವರು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.