ADVERTISEMENT

ಸುರೇಂದ್ರಗೆ ‘ಬಾರ್ಟನ್ಸ್ ಜೀವಮಾನ ಸಾಧನೆ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 23:55 IST
Last Updated 15 ಜುಲೈ 2025, 23:55 IST
<div class="paragraphs"><p>ಸುರೇಂದ್ರ</p></div>

ಸುರೇಂದ್ರ

   

ಬೆಂಗಳೂರು: ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯು ತನ್ನ 18ನೇ ವಾರ್ಷಿಕೋತ್ಸವದ ಪ್ರಯುಕ್ತ ನೀಡುತ್ತಿರುವ ‘ಬಾರ್ಟನ್ಸ್ ಜೀವಮಾನ ಸಾಧನೆ’ ಪ್ರಶಸ್ತಿಗೆ ವ್ಯಂಗ್ಯಚಿತ್ರಕಾರ ಸುರೇಂದ್ರ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ 1861ರಲ್ಲಿ ಪ್ರಾರಂಭವಾದ ‘ಬಾರ್ಟನ್ಸ್’ ಸಂಸ್ಥೆಯು ಈ ವಾರ್ಷಿಕ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿರುವ ಸುರೇಂದ್ರ ಅವರು ವಿವಿಧ ದಿನಪತ್ರಿಕೆಗಳಿಗೆ ವ್ಯಂಗ್ಯಚಿತ್ರ ಬರೆದಿದ್ದಾರೆ.

ADVERTISEMENT

ಆ.2ರಂದು ಬೆಳಿಗ್ಗೆ 11 ಗಂಟೆಗೆ ಟ್ರಿನಿಟಿ ವೃತ್ತದಲ್ಲಿರುವ ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯಲ್ಲಿ ಪ್ರಶಸ್ತಿ ಪ್ರದಾನ ಹಾಗೂ ವ್ಯಂಗ್ಯಚಿತ್ರ ಪ್ರದರ್ಶನದ ಉದ್ಘಾಟನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಆ.23ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಸುರೇಂದ್ರ ಅವರು ರಚಿಸಿದ ವ್ಯಂಗ್ಯಚಿತ್ರಗಳ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.