
ಬೆಂಗಳೂರು: ‘ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು ಒಂದೂವರೆ ಕಿ.ಮೀ. ವ್ಯಾಪ್ತಿಯೊಳಗೆ ಇರುವ ಎಲ್ಲಾ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಸೂಕ್ತ. ಈ ಕುರಿತು ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸುವೆ’ ಎಂದು ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
‘ಹಿಂದೆ ಸರ್ವ ಶಿಕ್ಷಾ ಅಭಿಯಾನ ಯೋಜನೆ ಜಾರಿಗೊಂಡಾಗ ಹೆಚ್ಚಿನ ಸರ್ಕಾರಿ ಶಾಲೆಗಳನ್ನು ಆರಂಭಿಸಲಾಯಿತು. ಖಾಸಗಿ ಶಾಲೆಗಳ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಮಾಗಡಿ ತಾಲ್ಲೂಕಿನ ಹಳ್ಳಿಯೊಂದಕ್ಕೆ ಹೋಗಿದ್ಧಾಗ ಅಲ್ಲಿನ ಕಿರಿಯ ಪ್ರಾಥಮಿಕ ಶಾಲೆಯ ಮೂರು ತರಗತಿಗಳಲ್ಲಿ ತಲಾ ಇಬ್ಬರು. ಎರಡು ತರಗತಿಗಳಲ್ಲಿ ಮಕ್ಕಳೇ ಇಲ್ಲದ್ದನ್ನು ನೋಡಿ ಬಂದಿದ್ದೇನೆ’ ಎಂದು ತಿಳಿಸಿದ್ದಾರೆ.
‘ಇಂತಹ ಸನ್ನಿವೇಶ ತಪ್ಪಿಸಲು ಸರ್ಕಾರಿ ಶಾಲೆಗಳ ವಿಲೀನ, ಮಕ್ಕಳನ್ನು ಶಾಲೆಗೆ ಕರೆ ತರಲು ಸಾರಿಗೆ ವ್ಯವಸ್ಥೆ, ಉತ್ತಮ ಶೌಚಾಲಯ, ಮೈದಾನದ ವ್ಯವಸ್ಥೆ ಮಾಡುವುದು ಒಳ್ಳೆಯದು. ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಗುಣಮಟ್ಟ ಹೆಚ್ಚಳದೊಂದಿಗೆ ವಿಶ್ವಾಸರ್ಹತೆ ವೃದ್ಧಿಗೆ ಒತ್ತು ನೀಡಬೇಕಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.