ADVERTISEMENT

ಅಂತರರಾಷ್ಟ್ರೀಯ ಶಸ್ತ್ರಚಿಕಿತ್ಸಾ ತಜ್ಞರ ದಿನ 26ಕ್ಕೆ: 150 ಉಚಿತ ಶಸ್ತ್ರ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 15:20 IST
Last Updated 23 ಜೂನ್ 2023, 15:20 IST
ರೋಬೊಟಿಕ್‌ ಯಂತ್ರದ ಮೂಲಕ ಶಸ್ತ್ರಚಿಕಿತ್ಸೆ
ರೋಬೊಟಿಕ್‌ ಯಂತ್ರದ ಮೂಲಕ ಶಸ್ತ್ರಚಿಕಿತ್ಸೆ   

ಬೆಂಗಳೂರು: ಅಂತರರಾಷ್ಟ್ರೀಯ ಶಸ್ತ್ರಚಿಕಿತ್ಸಾ ತಜ್ಞರ ದಿನವನ್ನು ಇದೇ 26ಕ್ಕೆ ಆಚರಿಸಲಾಗುವುದು. ಇದರ ಪ್ರಯುಕ್ತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 150 ರೋಗಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಶಸ್ತ್ರ ಚಿಕಿತ್ಸಕರ ಅಸೋಸಿಯೇಶನ್‌ (ಕೆಎಸ್‌ಸಿಎಎಸ್‌ಐ) ಅಧ್ಯಕ್ಷ ಡಾ.ಎಚ್‌.ವಿ. ಶಿವರಾಮ್‌ ತಿಳಿಸಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಶಸ್ತ್ರಚಿಕಿತ್ಸಕರು ಕನಿಷ್ಠ ಒಬ್ಬರಿಗೆ ಉಚಿತ ಚಿಕಿತ್ಸೆ ನೀಡಿದರೆ ಹಲವಾರು ರೋಗಿಗಳಿಗೆ ಚಿಕಿತ್ಸೆ ದೊರೆಯಲಿದೆ. ಸದ್ಯ 150 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಿದ್ದೇವೆ. ಜತೆಗೆ 20 ಕಡೆ ಆರೋಗ್ಯ ಸೇವೆ ಒದಗಿಸಲಾಗುವುದು. ಸರ್ಜನ್‌ಗಳ ಆರೋಗ್ಯ ಸಹ ಮುಖ್ಯ ಆಗಿರುವುದರಿಂದ ಅವರಿಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT