ADVERTISEMENT

ಸಮೀಕ್ಷೆ: ‘ಹಿಂದೂ ಸ್ವಕುಳಸಾಳಿ’ ಎಂದು ನಮೂದಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 20:28 IST
Last Updated 12 ಸೆಪ್ಟೆಂಬರ್ 2025, 20:28 IST
<div class="paragraphs"><p>ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ</p></div>

ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಅಕ್ಟೋಬರ್‌ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ ಸ್ವಕುಳಸಾಳಿ ಸಮಾಜದವರು ‘ಹಿಂದೂ ಸ್ವಕುಳಸಾಳಿ’ ಎಂದೇ ನಮೂದಿಸಬೇಕು ಎಂದು ‘ಕರ್ನಾಟಕ ರಾಜ್ಯ ಸ್ವಕುಳಸಾಳಿ ಸಮಾಜ ನೇಕಾರ’ ಸಂಘಟನೆ ಮನವಿ ಮಾಡಿದೆ.

ಧರ್ಮದ ಕಾಲಂನಲ್ಲಿ ‘ಹಿಂದೂ’, ಜಾತಿ ಕಾಲಂನಲ್ಲಿ ‘ಸ್ವಕುಳಸಾಳಿ’, ಕುಲಕಸುಬು ಕಾಲಂನಲ್ಲಿ ‘ನೇಕಾರಿಕೆ’ ನಮೂದಿಸಲು ಸಂಘಟನೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಚಂದ್ರಕಾಂತ ಭಂಡಾರೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.