ADVERTISEMENT

ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆ: ಬೆಂಗಳೂರು ಮಹಾನಗರಕ್ಕೆ ಪ್ರಶಸ್ತಿ 

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 11:19 IST
Last Updated 11 ನವೆಂಬರ್ 2021, 11:19 IST
   

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರವು ಪ್ರಶಸ್ತಿ ಪಡೆದಿದೆ.

ಈ ಸಾಧನೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಪುರಸ್ಕಾರಕ್ಕಾಗಿ ಬೆಂಗಳೂರು ನಗರದ ನಾಗರಿಕರು, ಬಿಬಿಎಂಪಿಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ರಾಕೇಶ್ ಸಿಂಗ್ ಅವರು ಅಭಿನಂದಿಸಿದ್ದಾರೆ.

ADVERTISEMENT

ನ. 20 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.