ADVERTISEMENT

ಭಾರತ–ದಕ್ಷಿಣ ಆಫ್ರಿಕಾ ಟ್ವೆಂಟಿ 20 ಪಂದ್ಯ: ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 11:58 IST
Last Updated 22 ಸೆಪ್ಟೆಂಬರ್ 2019, 11:58 IST
   

ಬೆಂಗಳೂರು: ಅಂತರರಾಷ್ಟ್ರೀಯ ಟ್ವೆಂಟಿ–20 ಕ್ರಿಕೆಟ್‌ ಪಂದ್ಯದ ನಿಮಿತ್ತಭಾನುವಾರ ಮೆಟ್ರೊ ರೈಲು ಸಂಚಾರದ ಅವಧಿಯನ್ನು ರಾತ್ರಿ 11.30ರವರೆಗೆ ವಿಸ್ತರಿಸಲಾಗಿದೆ.

ಕೊನೆಯ ರೈಲು ಮೆಜೆಸ್ಟಿಕ್‌ ನಿಲ್ದಾಣದಿಂದ ಭಾನುವಾರ ರಾತ್ರಿ 11.45ರವರೆಗೆ ನಾಲ್ಕು ದಿಕ್ಕುಗಳಲ್ಲಿ ಲಭ್ಯವಿರುತ್ತದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‌ಸಿಎಲ್‌) ಹೇಳಿದೆ.

ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣದಿಂದ ಇತರ ಮೆಟ್ರೊ ನಿಲ್ದಾಣಗಳಿಗೆ ರಾತ್ರಿ 10ರ ನಂತರ ಪ್ರಯಾಣಿಸಲು ₹50 ರಿಟರ್ನ್‌ ಜರ್ನಿ ಕಾಗದದ ಟಿಕೆಟ್‌ ಖರೀದಿಸಬಹುದು. ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಎಲ್ಲ ನಿಲ್ದಾಣಗಳಲ್ಲಿ ಈ ಟಿಕೆಟ್‌ ಲಭ್ಯ. ಕಬ್ಬನ್‌‍ಪಾರ್ಕ್‌ ಮೆಟ್ರೊ ನಿಲ್ದಾಣದಲ್ಲಿ ಭಾನುವಾರ ರಾತ್ರಿ 10ರ ನಂತರ ಟೋಕನ್‌ ಮಾರಾಟ ಇರುವುದಿಲ್ಲ ಎಂದು ನಿಗಮ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.