ADVERTISEMENT

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಟ್ಯಾಬ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 20:01 IST
Last Updated 13 ಜನವರಿ 2021, 20:01 IST
ಗ್ರಾಮ್ ಸಂಸ್ಥೆ, ರೋಟರಿ ಬೆಂಗಳೂರು ಡೌನ್‌ಟೌನ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು
ಗ್ರಾಮ್ ಸಂಸ್ಥೆ, ರೋಟರಿ ಬೆಂಗಳೂರು ಡೌನ್‌ಟೌನ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು   

ಬೆಂಗಳೂರು: ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಗ್ರಾಮ್ ಸಂಸ್ಥೆ, ರೋಟರಿ ಬೆಂಗಳೂರು ಡೌನ್‌ಟೌನ್ ಕ್ಲಬ್ ವತಿಯಿಂದ ಕೂಡ್ಲು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಟ್ಯಾಬ್ಲೆಟ್ ಕಂಪ್ಯೂಟರ್‌ಗಳನ್ನು ವಿತರಿಸಲಾಯಿತು.

ಕನ್ನಡ ಮಾಧ್ಯಮದ 36 ಮತ್ತು ಇಂಗ್ಲಿಷ್ ಮಾಧ್ಯಮದ 20 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು. 10ನೇ ತರಗತಿಯ ಪಠ್ಯಕ್ರಮಕ್ಕೆ ಅನುಕೂಲವಾಗುವಂತೆ ಪಠ್ಯಗಳನ್ನು ಅದರಲ್ಲಿ ಅಳವಡಿಸಲಾಗಿದೆ. ರೋಟರಿ ಕ್ಲಬ್‌ನ
ಉಷಾ ಸೆಲ್ವರಾಜ್ ಅವರು ಟ್ಯಾಬ್‌ ಮತ್ತು ಡಿಜಿಟಲ್ ಪಠ್ಯದ ಬಳಕೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಗ್ರಾಮ್‌ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಸವರಾಜು ಆರ್.ಶ್ರೇಷ್ಠ, ‘ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಿದಾಗ ಮಾತ್ರ ರಾಷ್ಟ್ರ ನಿರ್ಮಾಣದ ಕೆಲಸ ಸುಲಭವಾಗುತ್ತದೆ. ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕಾಗಿ ತಂತ್ರಜ್ಞಾನದ ಸಹಾಯ ಅಗತ್ಯವಿದೆ. ಅದನ್ನು ಆಲೋಚಿಸಿ ಟ್ಯಾಬ್‌ಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ತಿಳಿಸಿದರು.

ADVERTISEMENT

ನಗರ ಜಿಲ್ಲೆ ರೋಟರಿ ಕ್ಲಬ್ ಪಿಡಿಜಿ ಮತ್ತು ಟೀಚ್ ಅಧ್ಯಕ್ಷೆ ಡಾ.ಮಧುರಾ ಛತ್ರಪತಿ ಮಾತನಾಡಿದರು. ಮುಖ್ಯ ಶಿಕ್ಷಕ ರಘುಪತಿ, ಎಸ್‌ಡಿಎಂಸಿ ಸದಸ್ಯ ಮುನಿರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.