ಬೆಂಗಳೂರು: ಇಂಚರ ಸುಗಮ ಸಂಗೀತ ಸಂಸ್ಥೆ ನೀಡುವ ‘ಯುವ ಇಂಚರ’ ಪ್ರಶಸ್ತಿಗೆ ತಬಲಾ ವಾದಕ ಕಾರ್ತಿಕ್ ಭಟ್ ಆಯ್ಕೆಯಾಗಿದ್ದಾರೆ.
ಫೆಬ್ರುವರಿ 14ರಂದು ಸಂಜೆ 5ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಸೊಂಟಕ್ಕೆ, ಆನಂದ್ ಮಾದಲಗೆರೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾ.ವೆಂ.ಶ್ರೀನಿವಾಸಮೂರ್ತಿ ವಿರಚಿತ ಗೀತೆಗಳನ್ನು ಗಾಯಕರು ಪ್ರಸ್ತುತಪಡಿಸಲಿದ್ದಾರೆ. ನಂತರ ಕಾರ್ತಿಕ್ ಭಟ್ ಅವರಿಂದ ತಬಲಾ ವಾದನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.