ADVERTISEMENT

ವೇದಾಂತು: ನಾಳೆ ದೀಪಿಕಾ ಪಡುಕೋಣೆ ಜತೆ ಸಂವಾದ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 20:22 IST
Last Updated 10 ಜುಲೈ 2020, 20:22 IST
ನಟಿ ದೀಪಿಕಾ ಪಡುಕೋಣೆ
ನಟಿ ದೀಪಿಕಾ ಪಡುಕೋಣೆ   

ಬೆಂಗಳೂರು: ಆನ್‌ಲೈನ್‌ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ ವೇದಾಂತು, ಮಾನಸಿಕ ಆರೋಗ್ಯ ಕಾಳಜಿ ಕುರಿತು ನಾಳೆ ಭಾನುವಾರ (ಜು. 12) ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಜತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಹಲವಾರು ವಿಷಯಗಳು ಈ ಆನ್‌ಲೈನ್‌ ಸಂವಾದ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿವೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಗೆ ಉಪಯುಕ್ತವಾಗಿರಲಿದೆ. ‘ದಿ ಲಿವ್ ಲವ್‌ ಲಾಫ್‌ ಫೌಂಡೇಷನ್’ ಸ್ಥಾಪಕಿಯಾಗಿರುವ ದೀಪಿಕಾ ಅವರು ಕೋವಿಡ್‌ ಬಿಕ್ಕಟ್ಟಿನ ಸಂದರ್ಭ ಮತ್ತು ನಂತರದ ದಿನಗಳಲ್ಲಿನ ಒತ್ತಡ, ಖಿನ್ನತೆ, ಆತಂಕಗಳನ್ನು ಎದುರಿಸುವ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಆಸಕ್ತರು https://vdnt.in/MTDP ಅಂತರ್ಜಾಲ ತಾಣದಲ್ಲಿ ನೋಂದಾಯಿಸಿಕೊಳ್ಳಲು ವೇದಾಂತು ಸಿಇಒ ವಂಶಿ ಕೃಷ್ಣಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT