ADVERTISEMENT

ಟ್ಯಾಂಕರ್‌ ಚಕ್ರ ಹರಿದು ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 16:17 IST
Last Updated 1 ಸೆಪ್ಟೆಂಬರ್ 2024, 16:17 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.

ADVERTISEMENT

ಬೈಕ್‌ನಲ್ಲಿ ವೇಗವಾಗಿ ಬಂದ ನಲ್ಲೂರಹಳ್ಳಿಯ ನಿವಾಸಿ 19 ವರ್ಷದ ಯುವಕ, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ನೀರು ಪೂರೈಕೆ ಟ್ಯಾಂಕರ್‌ ವಾಹನದ ಚಕ್ರ ಹರಿದಿದೆ.

ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಆದರೂ ಬದುಕಿ ಉಳಿಯಲಿಲ್ಲ. ಅಪಘಾತದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.