ಬೆಂಗಳೂರು: ತೆರಿಗೆ ಪಾವತಿಸದೇ ಎರಡು ವರ್ಷಗಳಿಂದ ರಾಜ್ಯದಲ್ಲಿಯೇ ಸಂಚಾರ ನಡೆಸುತ್ತಿದ್ದ ಐಷಾರಾಮಿ ಫೆರಾರಿ ಕಾರನ್ನು ಜಯನಗರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತೆರಿಗೆ ಮತ್ತು ದಂಡ ಸೇರಿ ₹ 1.41 ಕೋಟಿ ಪಾವತಿಸುವಂತೆ ಕಾರು ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.
ಮಹಾರಾಷ್ಟ್ರದ ನೋಂದಣಿ ಹೊಂದಿರುವ ₹ 7.49 ಕೋಟಿ ವೆಚ್ಚದ ಫೆರಾರಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆ (ಪ್ರವರ್ತನ) ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ಪಿ. ರಮೇಶ್, ಸಿಬ್ಬಂದಿ ಅಸಾದುಲ್ಲಾ ಬೇಗ್, ರಂಜತ್ ಎನ್., ವಿಜಯಕುಮಾರ್, ಮಂಜುನಾಥ್, ಗಂಗಸ್ವಾಮಿ ಕಾರ್ಯಾಚರಣೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.