ADVERTISEMENT

ರಸ್ತೆ ಗುಂಡಿಯಿಂದ ಅಪಘಾತ: ಶಿಕ್ಷಕಿ ಸಾವು

ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿ ಅವಘಡ: ಗೂಡ್ಸ್ ವಾಹನ ಚಾಲಕ ಬಂಧನ

​ಪ್ರಜಾವಾಣಿ ವಾರ್ತೆ
Published 30 ಜನವರಿ 2022, 19:39 IST
Last Updated 30 ಜನವರಿ 2022, 19:39 IST
ಶರ್ಮಿಳಾ
ಶರ್ಮಿಳಾ   

ಬೆಂಗಳೂರು: ಬ್ಯಾಡರಹಳ್ಳಿ ಮುಖ್ಯರಸ್ತೆಯ ಅಂಜನಾನಗರ ವೃತ್ತದಲ್ಲಿ ಭಾನುವಾರ ಅಪಘಾತ ಸಂಭವಿ ಸಿದ್ದು, ಶರ್ಮಿಳಾ (38) ಎಂಬುವರು ಮೃತಪಟ್ಟಿದ್ದಾರೆ.

‘ಶಿಕ್ಷಕಿಯಾಗಿದ್ದ ಶರ್ಮಿಳಾ, ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣ ಎನ್ನಲಾದ ಗೂಡ್ಸ್ ವಾಹನ ಚಾಲಕ ಮಾದೇಶ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಾಗಡಿಗೆ ಸಂಪರ್ಕ ಕಲ್ಪಿಸುವ ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿ ಹೆಚ್ಚು ಗುಂಡಿಗಳು ಬಿದ್ದಿವೆ. ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಶರ್ಮಿಳಾ, ಗುಂಡಿಯಿಂದಾಗಿ ವಾಹನದ ಸಮೇತ ರಸ್ತೆಯಲ್ಲಿ ಬಿದ್ದಿದ್ದರು. ಅದೇ ರಸ್ತೆಯಲ್ಲಿ ಹೊರಟಿದ್ದ ಗೂಡ್ಸ್ ವಾಹನ, ಶರ್ಮಿಳಾ ಅವರ ಮೈ ಮೇಲೆ ಹರಿದಿತ್ತು ಎನ್ನಲಾಗಿದೆ.‘

ADVERTISEMENT

‘ಅಪಘಾತದ ಬಗ್ಗೆ ಸ್ಥಳೀಯರು ಹೇಳಿಕೆ ನೀಡಿದ್ದಾರೆ. ಸ್ಥಳಪರಿಶೀಲನೆಯನ್ನೂ ನಡೆಸಲಾಗಿದೆ. ಅಪಘಾತಕ್ಕೆ ರಸ್ತೆಯಲ್ಲಿನ ಗುಂಡಿ ಕಾರಣವೇ ? ಅಥವಾ ಬೇರೆ ಏನಾದರೂ ಕಾರಣವಿದೆಯಾ? ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ಪೊಲೀಸ್ ಅಧಿಕಾರಿ ಹೇಳಿದರು.

ಸ್ಥಳೀಯರ ಆಕ್ರೋಶ: ಅಪಘಾತವಾದ ಸ್ಥಳದಲ್ಲಿ ಸೇರಿದ್ದ ಸ್ಥಳೀಯರು, ‘ಗುಂಡಿಯಿಂದಲೇ ಅಪಘಾತವಾಗಿದೆ‘ ಎಂದು ಆರೋಪಿಸಿದರು.

‘ಹಲವು ಬಾರಿ ಮನವಿ ನೀಡಿದರೂ ಗುಂಡಿ ಮುಚ್ಚಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ‘ ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಪ್ರತಿಭಟನೆ: ಶಿಕ್ಷಕಿ ಸಾವು ಖಂಡಿಸಿ ಅಪಘಾತ ನಡೆದ ಸ್ಥಳದಲ್ಲಿ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಾರ್ಯಕರ್ತರು ಜನವರಿ 31ರಂದು ಬೆಳಿಗ್ಗೆ 9 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿ
ಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.