ಬೆಂಗಳೂರು: ಯುವ ಪೀಳಿಗೆಯನ್ನು ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಕ್ಯಾನ್ಸರ್ ತಜ್ಞೆ ವಿಜಯಲಕ್ಷ್ಮಿ ದೇಶಮಾನೆ ಹೇಳಿದರು.
ಎನ್‌ಆರ್ ಕಾಲೋನಿಯ ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವ ಪೀಳಿಗೆಗೆ ಈಗ ಜ್ಞಾನ ಪಡೆಯುವುದು ಕಷ್ಟವಲ್ಲ. ಆದರೆ ಸರಿಯಾದ ಜ್ಞಾನ ಪಡೆದುಕೊಳ್ಳಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಬೇಕೇ ಬೇಕು. ಯುವ ಪೀಳಿಗೆಯನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಎಪಿಎಸ್ ವಿಶ್ವಸ್ಥ ಸಂಸ್ಥೆ ಅಧ್ಯಕ್ಷ ವಿಷ್ಣುಭರತ್ ಆಲಂಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶ್, ಟ್ರಸ್ಟಿ ಎ.ಆರ್. ಆಚಾರ್ಯ, ಎ.ಮುರಳೀಧರ್, ರಾಮಪ್ರಸಾದ್, ಆರ್.ವಿ.ವಿಜಯಭಾಸ್ಕರ್, ಎ.ಪಿ.ಆಚಾರ್ಯ ಹಾಜರಿದ್ದರು. ಅತ್ಯುತ್ತಮ ಸಾಧನೆ ಮಾಡಿದ ಅಧ್ಯಾಪಕರನ್ನು ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.