ADVERTISEMENT

ತಂತ್ರಜ್ಞಾನ ಸಮ್ಮೇಳನ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 19:25 IST
Last Updated 17 ಡಿಸೆಂಬರ್ 2019, 19:25 IST

ಬೆಂಗಳೂರು:ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನ್ಯೂ ಹೊರೈಜಾನ್ ತಾಂತ್ರಿಕ ಕಾಲೇಜು,ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಹಾಗೂ ಕ್ಯಾಪ್ ಜೆಮಿನಿ ಸಹಭಾಗಿತ್ವದಲ್ಲಿ ಇದೇ 19ರಿಂದ 21ರವರೆಗೆ ಮಾರತ್ತಹಳ್ಳಿಯ ಕಾಲೇಜಿನ ಪ್ರಾಂಗಣದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್, ‘ಸಮ್ಮೇಳನದಲ್ಲಿ ವಿಟಿಯು ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ ಭಾಗವಹಿಸಲಿದ್ದಾರೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಬೆಳವಣಿಗೆ ಬಗ್ಗೆ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ವಿವಿಧ ದೇಶಗಳ ತಜ್ಞರು, ಸಂಶೋಧಕರು, ವಿಜ್ಞಾನಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT