ADVERTISEMENT

ಮಹಡಿಯಿಂದ ಬಿದ್ದು ಟೆಕಿ ಸಾವು; ಆತ್ಮಹತ್ಯೆ ಶಂಕೆ

​ಪ್ರಜಾವಾಣಿ ವಾರ್ತೆ
Published 21 ಮೇ 2020, 20:58 IST
Last Updated 21 ಮೇ 2020, 20:58 IST

ಬೆಂಗಳೂರು: ಬೆನ್ನಿಗಾನಹಳ್ಳಿ ಬಳಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ನಾಲ್ಕನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ (ಟೆಕಿ) ಉತ್ತಮ್ ಹೆಗಡೆ (30) ಎಂಬುವರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.‌

ಗುರುವಾರ ನಸುಕಿನಲ್ಲಿ ಈ ಘಟನೆ ನಡೆದಿದ್ದು, ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಉತ್ತಮ್ ಹೆಗಡೆ ಕುಟುಂಬದ ಜೊತೆ ಅಪಾರ್ಟ್‌ಮೆಂಟ್‌ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಬುಧವಾರ ರಾತ್ರಿ ಕುಟುಂಬದವರ ಜೊತೆ ಸೇರಿ ಒಟ್ಟಿಗೆ ಊಟ ಮಾಡಿದ್ದರು. ನಂತರ, ಎಲ್ಲರೂ ಅವರವರ ಕೊಠಡಿಗೆ ಹೋಗಿ ಮಲಗಿದ್ದರು’ ಎಂದು ಪೊಲೀಸರು ಹೇಳಿದರು.

ADVERTISEMENT

‘ನಸುಕಿನಲ್ಲಿ ಕೊಠಡಿಯಿಂದ ಹೊರಬಂದಿದ್ದರು ಎನ್ನಲಾದ ಉತ್ತಮ್, ನಾಲ್ಕನೇ ಮಹಡಿಯಿಂದ ಬಿದ್ದಿದ್ದರು. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ಮೃತದೇಹವನ್ನು ಸಿ.ವಿ. ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.