ADVERTISEMENT

ಬೆಂಗಳೂರು | ಟೆಕಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳ ಆರೋಪ; ಪತಿ ಬಂಧನ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 2:59 IST
Last Updated 29 ಆಗಸ್ಟ್ 2025, 2:59 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಮಹಿಳಾ ಟೆಕಿಯೊಬ್ಬರು ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಸುದ್ದಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕೊಪ್ಪಳ ಜಿಲ್ಲೆ ಗಂಗಾವತಿಯವರಾಗಿದ್ದ ಶಿಲ್ಪಾ (27) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆಕೆಯ ಪತಿ ಪ್ರವೀಣ್‌ನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

‘ಪ್ರವೀಣ್ ಮತ್ತು ಶಿಲ್ಪಾ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ನಗರದ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ, ಗಂಗೋತ್ರಿ ಸರ್ಕಲ್‌ನಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆರಂಭದಲ್ಲಿ ದಂಪತಿ ಚೆನ್ನಾಗಿಯೇ ಇದ್ದರು. ಮಗು ಹುಟ್ಟಿದ ಬಳಿಕ ಶಿಲ್ಪಾ ಕೆಲಸ ತೊರೆದು ಮನೆಯಲ್ಲೇ ಇದ್ದರು‘ ಎಂದು ಪೊಲೀಸರು ಮಾಹಿತಿ ನೀಡಿದರು.

‘ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್, ಮದುವೆಯಾದ ಒಂದು ವರ್ಷದ ಬಳಿಕ ಕೆಲಸ ತೊರೆದು, ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ. ತನ್ನ ವ್ಯವಹಾರಕ್ಕೆ ಹಣದ ಅಗತ್ಯವಿದ್ದ ಕಾರಣ, ತವರು ಮನೆಯಿಂದ ಹಣ ತರುವಂತೆ ಪತ್ನಿಗೆ ಹಿಂಸೆ ನೀಡುತ್ತಿದ್ದ ಎಂದು ಮೃತಳ ಕುಟುಂಬದವರು ದೂರು ನೀಡಿದ್ದಾರೆ. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಕೆಲ ತಿಂಗಳಿಂದ ಜಗಳ ನಡೆಯುತ್ತಿತ್ತು. ಮಂಗಳವಾರ ಕೂಡ ಇಬ್ಬರ ನಡುವೆ ಜಗಳ ನಡೆದಿದ್ದು, ಅದರಿಂದ ಬೇಸರಗೊಂಡಿರುವ ಶಿಲ್ಪಾ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಪ್ರವೀಣ್ ಕೋಣೆಯ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

ವರದಕ್ಷಿಣೆ ಕಿರುಕುರುಳ ನೀಡುತ್ತಿದ್ದರಿಂದ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಮೃತಳ ತಾಯಿ ಶಾರದ ಅವರು ಅಳಿಯ ಪ್ರವೀಣ್ ಮತ್ತು ಆತನ ತಾಯಿಯ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.