ಬೆಂಗಳೂರು: ತಿಂಗಳ ಹಿಂದೆಯಷ್ಟೇ ಆರಂಭವಾಗಿರುವ ಹಳದಿ ಮಾರ್ಗದಲ್ಲಿ ಸೋಮವಾರ ಮೆಟ್ರೊ ರೈಲು ಸಂಚಾರದ ವೇಳೆ ತಾಂತ್ರಿಕ ದೋಷ ಕಂಡು ಬಂದ ಕಾರಣ ಪ್ರಯಾಣಿಕರು ಪರದಾಡಿದರು.
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮಾರ್ಗದ ಮೆಟ್ರೊ ರೈಲು ಸಂಚಾರ ಸಂಜೆ 7ಕ್ಕೆ ಆರಂಭವಾಗಬೇಕಿತ್ತು. ಆದರೆ, ಆರ್.ವಿ.ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಏಳು ಗಂಟೆ ಮೂರು ನಿಮಿಷವಾದರೂ ರೈಲು ಸಂಚಾರ ಶುರುವಾಗಲಿಲ್ಲ.
ತಾಂತ್ರಿಕ ದೋಷದಿಂದ ಉಂಟಾದ ಸಮಸ್ಯೆಯಿಂದಾಗಿ ಪ್ರಯಾಣಿಕರು ಮೆಟ್ರೊದಲ್ಲಿಯೇ ಇರಬೇಕಾಯಿತು. ಸಂಚಾರ ವಿಳಂಬವಾಗಿದ್ದರಿಂದ ಕೆಲವರು ಹೊರ ನಡೆದು ಪರ್ಯಾಯ ವ್ಯವಸ್ಥೆ ಮಾಡಿಕೊಂಡರು. ಕೆಲ ಹೊತ್ತಿನ ನಂತರ ಸಂಚಾರ ಪುನಾರಂಭಗೊಂಡಿತು.
'ಸಂಜೆ 7ರಿಂದ ರಾತ್ರಿ 9ರವರೆಗೆ ಹಳದಿ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ರಾತ್ರಿ 9ರ ಹೊತ್ತಿಗೆ ಸಂಚಾರ ಸಹಜ ಸ್ಥಿತಿಗೆ ಮರಳಿತು. ಈ ತೊಂದರೆಗೆ ವಿಷಾದಿಸುತ್ತೇವೆ' ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.