ಮೆಟ್ರೊ ನಿಲ್ದಾಣ
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೊ ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ರೈಲುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನೇರಳೆ ಮಾರ್ಗದ ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿತ್ತಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸಂಚಾರ ಮುಂದುವರಿದಿದೆ.
ಪ್ರಯಾಣಿಕರಿಗೆ ಇದರಿಂದಾಗುವ ಉಂಟಾಗಿರುವ ಅನನುಕೂಲತೆಗೆ ಬಿಎಂಆರ್ ಸಿಎಲ್ ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.