ADVERTISEMENT

ಜೆಟ್‌ ಏರ್‌ವೇಸ್‌ ವಿಮಾನದಲ್ಲಿ ತಾಂತ್ರಿಕ ದೋಷ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 19:11 IST
Last Updated 27 ಡಿಸೆಂಬರ್ 2018, 19:11 IST
   

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೆಟ್‌ ಏರ್‌ವೇಸ್‌ ವಿಮಾನದಲ್ಲಿ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ಹಾರಾಟ ನಡೆಸಬೇಕಿದ್ದ ‘9ಡಬ್ಲ್ಯು713’ ಸಂಖ್ಯೆ ವಿಮಾನದಲ್ಲಿಪ್ರಯಾಣಿಕರು ಏರುವ ವೇಳೆಯೇತಾಂತ್ರಿಕ ದೋಷ ಕಾಣಿಸಿಕೊಂಡಿತು. ಅದನ್ನು ಗಮನಿಸಿದ ಪೈಲಟ್‌, ನಿಲ್ದಾಣದ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನೆಲ್ಲ ಕೆಳಗೆ ಇಳಿಸಿದರು ಎಂದು ಮೂಲಗಳು ತಿಳಿಸಿವೆ.

‘ವಿಮಾನದಲ್ಲಿ ಮಂಗಳೂರಿಗೆ ಹೋಗಲು 71 ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದ್ದರು. ನಿಗದಿತ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ, ಬೇರೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಮಂಗಳೂರಿಗೆ ಕಳುಹಿಸಿಕೊಡಲಾಯಿತು’ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.